ಆರೋಗ್ಯ ಸಂಜೀವಿನಿಗೆ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಜಾರಿಗೆ ನೌಕರರ ಸಂಘ ಮನವಿ, ಕೋಲಾರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳನ್ನು ನೋಂದಾಯಿಸಿಕೊಂಡು ಸರ್ಕಾರಿ ನೌಕರರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್ ಅವರಿಗೆ ಗುರುವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.