ಹಳಿಯಾಳ : ತಾಲೂಕಿನ ಕೆಸರೊಳ್ಳಿ ಕ್ರಾಸ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ, ಟ್ರಕ್ಕೊಂದು ರಸ್ತೆ ಪಕ್ಕದ ಹೊಲಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು, ಈ ಬಗ್ಗೆ ಇಂದು ಸೋಮವಾರ ಬೆಳಿಗ್ಗೆ 9:30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆಯಿಂದ ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ನೀಲಗಿರಿ ಕಟ್ಟಿಗೆ ಹೇರಿಕೊಂಡು ಬರುತ್ತಿದ್ದ ಈ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ಉರಳಿ ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಆದರೆ, ಲಾರಿ ಚಾಲಕ ಪರಶು ರಾಮಪ್ಪನಿಗೆ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಹಳಿಯಾಳ ಪೊಲೀಸರ ಸಹಾಯದಿಂದ ಗಾಯಾಳನ್ನು ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.