ಬೆಂಗಳೂರು ಉತ್ತರ: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ ಅದಕ್ಕಾಗಿಯೇ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ; ಸಿಎಂ
ಹಸಿವು ಮತ್ತು ಹಸಿವಿನ ಸಂಕಟ, ಅನ್ನ ಮತ್ತು ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕಾಗಿಯೇ ನಾನು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಗುರುವಾರ ವಿಧಾನಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ, ಈ ಹಿನ್ನಲೆಯಲ್ಲಿ ಯಾರೂ ಅನ್ನವನ್ನು ವ್ಯರ್ಥ ಮಾಡಿ ಬಿಸಾಡಬಾರದು ಎಂದು ಮನವಿ ಮಾಡಿದರು.