ಕಲಬುರಗಿ: ಜಿಲ್ಲೆಗೆ 341 ಕೋಟಿ ರೂ. ಬೆಳೆ ವಿಮೆ ಬಿಡುಗಡೆ: ನಗರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ
ಕಳೆದ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ರೂ 341 ಕೋಟಿ ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿಂದು ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆವಿಮೆ ಮಾಡಿಸಲು ಒತ್ತು ನೀಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ಬೆಳೆ ವಿಮೆ ಮಾಡಿದ ರೈತರ ಸಂಖ್ಯೆ ಹೆಚ್ಚಿದೆ ಎಂದರು. ಈ ಸಲ ಡಿಎಪಿ ಗೊಬ್ಬರ ತೊಂದರೆಯಾಗುವ ಸಾಧ್ಯತೆ ಇದೆ. ಯಾಕೆಂದರೆ ನಮ್ಮ ರಾಜ್ಯಕ್ಕೆ ಕೇವಲ 42% ಮಾತ್ರ ಆಮದಾಗಿದೆ ಎಂದರು.