ಸಕಲೇಶಪುರ: ಹೊಸೂರು ಗ್ರಾಮದಲ್ಲಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ದಾರುಣ ಅಂತ್ಯ.!
ಸಕಲೇಶಪುರ : ನೀರಿನ ಹೊಂಡ ದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಪ್ರಣಯ್ (7), ನಿಶಾಂತ್ (5) ಮೃತ ಬಾಲಕರು. ಐಬಿಸಿ ಕಾಫಿ ಎಸ್ಟೇಟ್ನಲ್ಲಿರುವ ನೀರಿನ ಹೊಂಡ ದಲ್ಲಿ ಈ ದುರ್ಘಟನೆ ನಡೆದಿದ್ದು,ಪೋಷಕರು ಎಂದಿನಂತೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೊಂಡದಲ್ಲಿ ಆಟವಾಡಲು ತೆರಳಿದ್ದಾಗ ದುರಂತ ಸಂಭವಿಸಿದೆ.ಹೊಂಡ ಆಳವಾಗಿದ್ದರಿಂದ ನೀರಿಗೆ ಇಳಿದವರು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ನಗರಠಾಣೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬಾಲಕರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ತುತ್ತಿನ ಚೀಲ ತುಂಬಿಸಿಕೊಳ್ಳಲು ಪೋಷಕರು ಕೂಲಿ ಕೆಲಸಕ್ಕೆ ಆಗಮಿಸಿದ್ದರು.