ಬೆಂಗಳೂರು ಉತ್ತರ: ನಗರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಮಂಗಳವಾರ ಮಧ್ಯಾಹ್ನ 12:30 ರ ಸುಮಾರಿಗೆ ಗಾಂಧಿನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ರವರು ಇಂದು ಬಿ.ವಿ.ಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್ ನಲ್ಲಿ ಭೂಮಿ ಪೂಜೆ ನೆರವೇರಿಸಿದರು.