ಹಾಸನ: ಹಾಸನಾಂಬ ದೇವಿ ಉತ್ಸವಕ್ಕೆ ಸಿದ್ಧತೆ ಪೂರ್ಣ: ಅ. 15 ರಂದು ಸಿಎಂ-ಡಿಸಿಎಂ ಅವರಿಂದ ದೇವಿಯ ದರ್ಶನ: ನಗರದಲ್ಲಿ ಸಚಿವ ರಾಮಲಿಂಗರೆಡ್ಡಿ
Hassan, Hassan | Oct 7, 2025 ಹಾಸನ: ಈ ಬಾರಿಯ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಯಶಸ್ವಿಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಂಡಿದ್ದು ಅ.15 ರಂದು ಸಿಎಂ, ಡಿಸಿಎಂ ದೇವಿಯ ದರ್ಶನಕ್ಕೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ದೇವಿಯ ದರ್ಶನಕ್ಕೆ ಆಮಿಸುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಾರಿಯೂ ಕಳೆದ ಬಾರಿಗಿಂತ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದ ಅವರು, ಕಳೆದ ಬಾರಿ ಕೆಲವು ಗೊಂದಲಗಳಾಗಿದ್ದವು. ಈ ಬಾರಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ ಎಂದರು. 80 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿದೆ ಎಂದರು.