ಹಿರಿಯೂರು:-ನಗರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ಪೂಜೆ ಸಲ್ಲಿಸಿದ ಬಳಕ ಜನರ ಅಹವಾಲು ಸ್ವೀಕರಿಸಿ ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.