ಔರಾದ್: ಬೆಳೆಹಾನಿ ಪರಿಹಾರ ವಿತರಣೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಅವರಿಂದ ಮಲತಾಯಿ ಧೋರಣೆ : ಪಟ್ಟಣದಲ್ಲಿ ಶಾಸಕ ಪ್ರಭು ಚೌಹಾಣ್ ಆರೋಪ
Aurad, Bidar | Nov 29, 2025 ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಅವರು ಬಿಜೆಪಿ ಶಾಸಕರಿರುವ ಕ್ಷೇತ್ರಗಳ ಜೊತೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಶಾಸಕ ಪ್ರಭು ಚೌಹಾಣ್ ಅವರು ಆರೋಪಿಸಿದರು. ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ 1:30ಕ್ಕೆ ಹಮ್ಮಿಕೊಂಡ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.