ಸಂಡೂರು: ತೋರಣಗಲ್ಲು ಗ್ರಾಮದಲ್ಲಿ ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಓರ್ವನ ಕ್ಲಿನಿಕ್ ಸೀಜ್
Sandur, Ballari | Nov 13, 2025 ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಗುರುವಾರ ಬೆಳಿಗ್ಗೆ 11ಗಂಟೆಗೆ ತಿಳಿಸಿದ್ದಾರೆ. ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು. ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂ