ಬಳ್ಳಾರಿ: ನಗರದಲ್ಲಿಶಾಸಕ ಭಾರತ ರೆಡ್ಡಿಸಮ್ಮುಖದಲ್ಲಿ
ಹಲವಾರು ಜನರು ಕಾಂಗ್ರೆಸ್ ಗೆ ಸೇರ್ಪಡೆ
ರಾಜ್ಯದಲ್ಲಿನ ಕಾಂಗ್ರೆಸ್ ಜನಪರ ಆಡಳಿತ ಮೆಚ್ಚಿ ನೂರಾರು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸಂತಸಕರ ಬೆಳವಣಿಗೆಯಾಗಿದೆ ಎಂದು ಶಾಸಕ ಭರತ್ ರೆಡ್ಡಿ ಹೇಳಿದರು. ಬಳ್ಳಾರಿ ನಗರದಲ್ಲಿ ಭಾನುವಾರ ಸಂಜೆ 5ಗಂಟೆಗೆ ನಗರದ ಬಂಡಿಮೋಟ್ ಹಾಗೂ ಎಂ.ಕೆ. ನಗರದಲ್ಲಿ ನೂರಾರು ಮಂದಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.ಶಾಸಕ ಭರತ್ ರೆಡ್ಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ. ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ನಂಬಿ ನಮ್ಮ ಪಕ್ಷಕ್ಕೆ ಇಂದು ಹಲವರು ಸೇರ್ಪಡೆಗೊಂಡಿದ್ದಾರೆ. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅವರ ರಾಜಕೀಯ ಭವಿಷ್ಯವು ಸುಗಮವಾಗಿರಲಿ ಎಂದು ಶುಭ ಹಾರೈಸಿದರು.