ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸಾಕಷ್ಟು ಚುನಾವಣಾ ಏಳು ಬೀಳು ನೋಡಿದೆ: ಸ್ವರ್ಣಸಂದ್ರದಲ್ಲಿ ನಿಖಿಲ್ ಕುಮಾರಸ್ವಾಮಿ
Mandya, Mandya | Oct 31, 2025 ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸಾಕಷ್ಟು ಚುನಾವಣಾ ಏಳು ಬೀಳು ನೋಡಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಶುಕ್ರವಾರ ನಗರದ ಸ್ವರ್ಣಸಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, MDCC ಬ್ಯಾಂಕ್ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿದೆ, ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದರು. ಜೆಡಿಎಸ್ ಹಿನ್ನಡೆ ಬಗ್ಗೆ ಚರ್ಚೆ ಮಾಡಿದ್ರು ಪ್ರಯೋಜನ ಇಲ್ಲ. ದೇವೇಗೌಡ್ರು ಕುಟುಂಬ ಈ ತರಹ ಸಾಕಷ್ಟು ಚುನಾವಣೆಗಳನ್ನು ನೋಡಿದೆ ಜಿಲ್ಲಾ ನಾಯಕರು ಒಗ್ಗಟ್ಟಿನಿಂದ ಹೇಗೆ ಕೆಲಸ ಮಾಡಬೇಕು ಅನ್ನೊದರ ಬಗ್ಗೆ ಕುಮಾರಣ್ಣ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕುಳಿತು ಎಲ್ಲವನ್ನೂ ಚರ್ಚೆ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.