ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ಹಮ್ಮಿಕೊಂಡಿದ್ದ ವಿಶೇಷ ಶಿಬಿರವನ್ನ ಹಮ್ಮಿಕೊಂಡಿದ್ದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಶಿಭಿರಕ್ಕೆ ಚಾಲನೆ ನೀಡಿ ಮಾತನಾಡಿದ್ದು ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಬ್ಯಾಂಕ್ ಅಧಿಕಾರಿಗಳು, ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ನೆರವು ಪಡೆಯುವಂತೆ ಸಲಹೆ ನೀಡಿದರು