ಬಾದಾಮಿ: ಪಟ್ಟಣದಲ್ಲಿ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಗೊಂದಿಕೇರಿ ಓಣಿಯಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬಾಗಲಕೋಟ ಬಿಜೆಪಿ ಜಿಲ್ಲಾಧ್ಯಕ್ಷರು ಶಾಂತಗೌಡ ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ನಂತರ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಹಾಗೂ ಸ್ಥಳೀಯ ಪ್ರಮುಖರು, ಗುರುಹಿರಿಯರು, ಮುಖಂಡರು ಉಪಸ್ಥಿತರಿದ್ದರು.