ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ:ನಗರದಲ್ಲಿ ಸಂಸದ ಬಿ ವೈ ರಾಘವೇಂದ್ರ
ಹಿಂದೂ ಜಾತಿಗಳ ಜೊತೆ ಕ್ರಿಶ್ಚಿಯನ್ ಜಾತಿ ಸೇರಿಸುವ ವಿಚಾರ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಿಂದೂ ಸಮಾಜ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಆರೋಪಿಸಿದ್ದಾರೆ.ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈ ರೀತಿ ಸಿಎಂ ಸಿದ್ದರಾಮಯ್ಯ ಮಾಡ್ತಿದ್ದಾರೆ. ಸಿದ್ದರಾಮಯ್ಯ ಯೋಚನೆ ಮಾಡಿ ಮಾತನಾಡಬೇಕು. ಹಿಂದೂ ಸಮಾಜದ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ನಡುವಳಿಕೆ ಖಂಡಿಸುತ್ತೇನೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.