ಕಲಬುರಗಿ: ಆರ್‌ಎಸ್‌ಎಸ್ ಪರವಾಗಿ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್: ನಗರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ
ಆರ್‌ಎಸ್ ಎಸ್ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದಂತೆ ಪೊಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಪ್ರತಿಕ್ರಿಯೇ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಇದೊಂದು ಫೇಕ್ ಪೋಸ್ಟ್ ಆಗಿದೆ. ಸತ್ಯಮಾರ್ಗದಲ್ಲಿ ಗೆಲ್ಲಲು ಸಾಧ್ಯವಾಗದವರು ಸುಳ್ಳಿನ ಮಾರ್ಗದ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆಂದು ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಭಾನುವಾರ 9 ಗಂಟೆಗೆ ಪ್ರಕಟಣೆ ನೀಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರ ಕುರಿತು ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಇಂತಹ ಕುತಂತ್ರ ಮತ್ತು ಕುಯುಕ್ತಿಗಳಿಗೆ ಕಾನೂನಿನ ಮೂಲಕವೇ ಉತ್ತರ ನೀಡಲಾಗುವುದು ಎಂದು ಪ