ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಸ್ಪಿ
ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ನಗರದ ಡಿಎಆರ್ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಿ, ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು. ಕಾನೂನು ಸುವ್ಯವಸ್ಥೆ, ಅಪರಾಧಿಕಾ ಕಾನೂನು, ಮನೆ ಮನೆಗೆ ಪೊಲೀಸ್ ಸಕ್ರಿಯವಾಗಿ ಜಾರಿಗೆ ತರುವ ಬಗ್ಗೆ, ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಎಸ್ಪಿ ಖಡಕ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಹೆಚ್ಚಾದ ಕ್ರೈಂಗಳ ಬಗ್ಗೆ ಅಧಿಕಾರಿಗಳಿಂದ ಎಸ್ಪಿ ಮಾಹಿತಿ ಸಂಗ್ರಹಿಸಿದರು.