ಚಿತ್ರದುರ್ಗ: ಚಿತ್ರದುರ್ಗದಲ್ಲಿ ದೀಪಾವಳಿ ಪಟಾಕಿ ಖರೀದಿಗೆ ಮುಗಿಬಿದ್ದ ಜನ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಪಟಾಕಿ ಖರೀದಿಸಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ. ಜಿಲ್ಲಾಡಳಿತ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದು, ಬೆಳಗಿನಿಂದಲೇ ಸಾವಿರಾರು ಮಂದಿ ಇಲ್ಲಿಗೆ ಆಗಮಿಸಿ ಪಟಾಕಿಗಳನ್ನು ಖರೀದಿಸುತ್ತಿದ್ದಾರೆ.