ಹಿರಿಯರ ಹೆಸರಿನಲ್ಲಿ ಸಸಿ ನೆಡಿ ಹುಟ್ಟುಹಬ್ಬ ಇತ್ಯಾದಿ ಕಾರ್ಯಕ್ರಮಗಳಲ್ಲಿ ಇತರೆ ಕಾಣಿಕೆ ಬದಲಿಗೆ ಸಸಿಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ಪರಿಸರ ಸಂರಕ್ಷಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಕೆ ಬಿರಾದಾರ್ ಅವರು ಸಲಹೆ ನೀಡಿದರು. ಪಟ್ಟಣದ ಶಾಹಿನ್ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಮಧ್ಯಾಹ್ನ 3:30ಕ್ಕೆ ನಡೆದ ವಾಯು ಮಾಲಿನ್ಯ ನಿಯಂತ್ರಣ ಮತ್ತು ಸಂಚಾರ ನಿಯಮಗಳ ಪಾಲನೆ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಧಿಕ ಮಲ್ಲಿಕಾರ್ಜುನ್ ಎಂ ವಾಹನ ನಿರೀಕ್ಷಕ ಎಂಎಸ್ ಸುಭಾಷ್ ಹಾಗೂ ವಾಹನ ಚಾಲನಾ ತರಬೇತಿ ಕೇಂದ್ರದ ಪ್ರಮುಖರು ಹಾಜರಿದ್ದರು.