ಭದ್ರಾವತಿ: ತಾಲ್ಲೂಕಿನ ಹೊಸ ಮನೆಯಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟಿಸಿದ ಶಾಸಕ ಬಿ.ಕೆ.ಸಂಗಮೇಶ್
ಭದ್ರಾವತಿ ನಗರದ ಹೊಸಮನೆಯಲ್ಲಿ ನೂತನ ಪೊಲೀಸ್ ಠಾಣೆಯನ್ನು ಸೋಮವಾರದಂದು ಶಾಸಕ ಬಿ.ಕೆ.ಸಂಗಮೇಶ್ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಗಣ್ಯರಿಗೆ ಅಭಿನಂದನಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ನಗರಸಭೆ ಅಧ್ಯಕ್ಷರು, ಸದಸ್ಯರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.