ಜಗಳೂರು: ಪಟ್ಟಣದ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಪಟ್ಟಣದ ಪಂಚಾಯಿತಿ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಗುರುವಾರ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕ್ಯ ನಾಯಕ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣಿಗೆ ವಿಶೇಷವಾದ ಗೌರವವಿದೆ. ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಎಷ್ಟೋ, ಅದೇ ರೀತಿ ಯಶಸ್ವಿ ಮಹಿಳೆಯ ಹಿಂದೆ ಪತಿಯ ಬೆಂಬಲವೂ ಇರಬೇಕು ಎಂದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮಂಜಮ್ಮ , ಲಲಿತ ಶಿವಣ್ಣ , ನಿರ್ಮಲಾ ಕುಮಾರಿ , ಲುಕ್ಮಾನ್ ಉಲ್ಲಾ ಖಾನ್ , ಸೇರಿದಂತೆ ಮತ್ತಿತರರಿದ್ದರು.