ವಿದ್ಯುತ್ ಶಾಕ್ ಕೊಟ್ಟು ಕಾಡುಕೋಣವನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಸಮೀಪದಲ್ಲಿ ನಡೆದಿದೆ. ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸರ್ವೆ ನಂ 9 ರಲ್ಲಿ ಗಂಡು ಕಾಡುಕೋಣವೊಂದು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ನಡೆದಿದ್ದು , ವಿಷಯ ತಿಳಿಯುತಿದ್ದಂತೆ ಅರಣ್ಯಾಧಿಕಾರಿಗಳು ಗುರುವಾರ ಮಧ್ಯಾಹ್ನ 2 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಸಮೀಪದಲ್ಲಿಯೇ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಕಾಡುಕೋಣವೊಂದನ್ನು ವಿದ್ಯುತ್ ಶಾಕ್ ನೀಡಿ ಹತ್ಯೆಗೈದಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೊಡೂರು ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಶಾಖವಳ್ಳಿ ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ.