ದಾವಣಗೆರೆ: ನಗರದಲ್ಲಿ ಕಾಂಗ್ರೆಸ್‌ಗೆ ಬಿಜೆಪಿಯ ಮಾಜಿ ಜಿಲ್ಲಾ ಪಂ ಸದಸ್ಯ ವಾಗೀಶ್ ಸ್ವಾಮಿ ಸೇರಿದಂತೆ ಅನೇಕರು ಸೇರ್ಪಡೆ
ದಾವಣಗೆರೆಯ ನಗರದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಈ ನಿವಾಸದಲ್ಲಿ ಇಂದು ಬಿಜೆಪಿಯ ಮಾಜಿ ಜಿಲ್ಲಾ ಪಂ ಸದಸ್ಯ ಹಾಗೂ ಮಾಯಕೊಂಡ ಕ್ಷೇತ್ರದಿದ ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ಇಳಿದಿದ್ದ ವಾಗೀಶ್ ಸ್ವಾಮಿ, ಮಲೆಬೆನ್ನೂರು ಪಟ್ಟಣ ಪಂಚಾಯತಿಯ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಪಕ್ಷದ ಸಿದ್ಧಾಂತಗಳನ್ನು ತಿಳಿಸಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಹರಿಹರ ತಾಲೂಕಿನ ಮಾಜಿ ಶಾಸಕರಾದ ರಾಮಪ್ಪ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.