ಬೆಳಗಾವಿ: ಮಾಜಿ ಸಂಸದ ರಮೇಶ್ ಕತ್ತಿ ಬಂಧಿಸುವಂತೆ ಕಾಕತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್
ಮಾಜಿ ಸಂಸದ ರಮೇಶ್ ಕತ್ತಿ ಬಂಧಿಸುವಂತೆ ಕಾಕತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್. ಬೆಳಗಾವಿಯ ಕಾಕತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ನಾಯಕ ಸಮಾಜದವರು ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ವಾಲ್ಮೀಕಿ ಸಮಾಜಕ್ಕಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದ ಮಾಜಿ ಸಂಸದ ರಮೇಶ್ ಕತ್ತಿ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಾಯಕ ಸಮಾಜದವರು ಸೋಮವಾರ ಪ್ರತಿಭಟನೆ ನಡೆಸಿದರು