ಕುಂದಾಪುರ: ರಸ್ತೆ ದಾಟಲು ನಿಂತಿದ್ದ ವೃದ್ಧನಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ
ಕುಂದಾಪುರದ ಅಂಕದಕಟ್ಟೆಯಲ್ಲಿ ಹೆದ್ದಾರಿ ದಾಟಲು ನಿಂತಿದ್ದ 70 ವರ್ಷದ ರಾಮಣ್ಣ ಶೆಟ್ಟಿ ಅವರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.