ಶಿವಮೊಗ್ಗದ ಆರ್ ಎಂಎಲ್ ನಗರದ ಮಾರ್ನಾಮಿಬೈಲ್ ನಲ್ಲಿ ಹರೀಶ್ ಎಂಬ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಗುರುವಾರ ಸಂಜೆ 5 ಗಂಟೆಗೆ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಬುದ್ದನಗರದ ನಿವಾಸಿ ಅರ್ಮಾನ್ (21), ಸಿಗೇಹಟ್ಟಿ ಬಡಾವಣೆ ನಿವಾಸಿ ನಿರಂಜನ್ (20) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳಾಗಿದ್ದಾರೆ. ಹರೀಶ್ ಮೇಲೆ ನಡೆದಿದ್ದ ಹಲ್ಲೆಯ ಸಿಸಿ ಕ್ಯಾಮರಾ ದೃಶ್ಯಾವಳಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ನಡುವೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.