ಶ್ರೀ ರಂಗಪಟ್ಟಣ : ಪಟ್ಟಣದಲ್ಲಿ ಬುಧವಾರ ನಡೆಯಲಿರುವ ಹನುಮಮಾಲಾ ಸಂಕೀರ್ತನಾ ಯಾತ್ರೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗ ಳಾದ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಮಂಗಳ ವಾರ ಸಾಯಂಕಾಲ 6 ಗಂಟೆ ಸಮಯದಲ್ಲಿ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಅವರು ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಿಮಿಷಾಂಭ ದೇವಾಲಯದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮ ಮಾಡಿ ಇಲ್ಲಿಂದ ಗಂಜಾಮ್, ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡ್, ಜಾಮಿಯಾ ಮಸೀದಿ ಪಕ್ಕದ ರಸ್ತೆ, ಪೇಟೆ ಬೀದಿ ಮೂಲಕ ಮೆರವಣಿಗೆ ಸಾಗಿ ರಂಗ ನಾಥಸ್ವಾಮಿ ದೇವಾಲಯದ ಬಳಿ ಅಂತ್ಯವಾಗಲಿದೆ ಎಂದರು.