ಜಮಖಂಡಿ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಿ.ಎಲ್.ಡಿ.ಇ ಕಾನೂನು ಮಹಾವಿದ್ಯಾಲಯದ ಸಭಾ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ, ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ ಅಭಿಯೋಜಕರ ಹಾಗೂ ತಾಲೂಕು ಆರೋಗ್ಯ ಇಲಾಖೆ ಜಮಖಂಡಿ ಬಿ.ಎಲ್.ಡಿ.ಇ.ಕಾನೂನು ಮಹಾವಿದ್ಯಾಲಯ ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇನ್ನು ಈ ಕಾರ್ಯಕ್ರಮದಲ್ಲಿ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮದ್ ಇಮಿತಿಯಾಜ್ ಅಹಮದ್,ತಾಲೂಕು ಕಾನೂನು ಸೇವಾ ಸಮಿತಿ ಅದ್ಯಕ್ಷ ಹಾಗೂ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ರಾಜಶೇಖರ ಎಸ್ ಹರಸೂರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.