ಕಲ್ಬುರ್ಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ತಮ್ಮ ಕಲಬುರಗಿಯ ಗೃಹ ಕಚೇರಿಯಲ್ಲಿ 2026ನೇ ಸಾಲಿನ ದಿನದರ್ಶಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದರು. ಬುಧವಾರ 5 ಗಂಟೆಗೆ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ದಿನದರ್ಶಿಕೆಯ ಮಹತ್ವ ಹಾಗೂ ಪಕ್ಷದ ಚಟುವಟಿಕೆಗಳ ಕುರಿತು ಚರ್ಚೆ ನಡೆಸಿದರು.