ಸಿದ್ಧಾಪುರ: ಸಿದ್ದಾಪುರ ಪ.ಪಂ ಸಭಾಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆ
ಸಿದ್ದಾಪುರ : ಸಿದ್ದಾಪುರ ಪಟ್ಟಣ ಪಂಚಾಯತ ಸಭಾಭವನದಲ್ಲಿ ಸೋಮವಾರ ಪೌರ ಕಾರ್ಮಿಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಸ್ವಚ್ಚತೆಯೇ ಸೇವೆ ಅಭಿಯಾವನ್ನೂ ಮುಕ್ತಾಯಗೊಳಿಸಲಾಯಿತು.ಶಾಸಕ ಭೀಮಣ್ಣ ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿ, ಪೌರಕಾರ್ಮಿಕರನ್ನು ಸನ್ಮಾನಿಸಿದರು. ಪೌರಕಾರ್ಮಿಕರ ಸೇವೆಯನ್ನು ಸ್ಮರಿಸಿ ಸಮಾಜದ ಪ್ರತಿಯೊಬ್ಬರು ಪೌರಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಜತೆಗೆ ಸ್ವಚ್ಚತೆ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಕರೆ ನೀಡಿದರು.ಈ ವೇಳೆ ಪಟ್ಟಣ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಇದ್ದರು