ಹಾಸನ: ಹಾಸನ ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧ ಆಯ್ಕೆ
Hassan, Hassan | Sep 17, 2025 ಹಾಸನ : ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ನಿರೀಕ್ಷೆಯಂತೆಯೇ 8ನೇ ವಾರ್ಡ್ ಜೆಡಿಎಸ್ ಸದಸ್ಯ ಗಿರೀಶ್ ಚನ್ನವೀರಪ್ಪ ಆಯ್ಕೆಯಾಗಿದ್ದಾರೆ.ಇಂದು ನಡೆದ ಚುನಾವಣೆಯಲ್ಲಿ ಗಿರೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದರು. ಚುನಾವ ಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಮೈಸೂರು ಪ್ರಭಾರಿ ಪ್ರಾದೇಶಿಕ ಆಯುಕ್ತ ವೆಂಕಟರಾಜ ಅವರು, ಮಧ್ಯಾಹ್ನ 1.30ರ ನಂತರ ಅವರೋಧ ಆಯ್ಕೆ ಘೋಷಿಸಿದರು. ಅಲ್ಲಿಗೆ ಗಿರೀಶ್ ಅವರೇ ಅಧ್ಯಕ್ಷರಾಗುವುದು ಖಚಿತ ಎಂಬ ಹಲವರ ನಿರೀಕ್ಷೆ ನಿಜವಾಗಿದೆ.ನೂತನ ಮೇಯರ್ ಅವರನ್ನು ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಎಂಎಲ್ಸಿ ಡಾ.ಸೂರಜ್ ರೇವಣ್ಣ, ಉಪ ಮೇಯರ್ ಹೇಮಲತಾ, ಜೆಡಿಎಸ್ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರು