ಶಿರಸಿ: ನಗರದ ಮಾರಿಕಾಂಬ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 'ಉತ್ತರ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ'ಗಳನ್ನು ಶಾಸಕ ಭೀಮಣ್ಣ ನಾಯ್ಕ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸದಾ ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ನೌಕರರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಅವಶ್ಯಕ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಬದಲಿಗೆ ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ ಎಂದರು. ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.