ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಶ್ರೀರಾಮನಗರ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಪ್ ಕೇರ್ ಗೆ ರವಾನಿಸಲಾಗಿತ್ತು ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗುತ್ತಿದೆ.