ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯ ರೂ.21 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿ: ಶಿರವಾಡದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ
ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.ಅವರು ಶನಿವಾರ ಸಂಜೆ 4.20ಕ್ಕೆ ಭೇಟಿ ನೀಡಿದ ಅವರು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮಾತನಾಡಿದರು. ಮಲೆನಾಡು ಮತ್ತು ಬಯಲುಸೀಮೆಯನ್ನು ಜೋಡಿಸುವ ಉದ್ದೇಶದಿಂದ ತಾಳಗುಪ್ಪ-ಶಿರಸಿ-ಹುಬ್ಬಳಿ 158 ಕಿ.ಮೀ ಉದ್ದದ ಹೊಸ ಮಾರ್ಗವು ರೈಲ್ವೆ ಮಂಡಳಿಯಲ್ಲಿ ಅನುಮೋದನೆಯಾಗಿದ್ದು, ಸಚಿವ ಸಂಪುಟದಲ್ಲಿ ಅನುಮೋದನೆಯಾಗಬೇಕಿದೆ. ಈ ಯೋಜನೆ ಮತ್ತು ತಾಳಗುಪ್ಪ ಹೊನ್ನಾವರ ಹೊಸ ಮಾರ್ಗಕ್ಕೆ ಒಟ್ಟು ಸುಮಾರು 21 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದರು