ಮಡಿಕೇರಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿಯಾದ ಹಿರಿಯ ಅಧಿಕಾರಿಗಳು
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಡಾ. ಜಿ.ಎಸ್. ಸಂಗ್ರೇಶಿ ಮತ್ತು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಪದ್ಮರಾಜ್ ನೇಮಚಂದ್ರ ದೇಸಾಯಿ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.