ಭತ್ತದ ಹೊರೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಾಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶವಾಗಿದ್ದು, ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.