ಧಾರವಾಡ: ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ: ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
ಎಲ್ಲ ಕ್ಷೇತ್ರಗಳಲ್ಲೂ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿಳಿಸಿದರು. ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರೇ ಪ್ರಜಾಪ್ರಭುತ್ವದ ಶಕ್ತಿ. ಎಲ್ಲರಲ್ಲೂ ಆರ್ಥಿಕ, ಸಾಮ