ಮಳವಳ್ಳಿ: ಪಟ್ಟಣದಲ್ಲಿ ಬಿಎಸ್ಪಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ , ಬಗರ್ ಹುಕುಂ ಸಾಗುವಳಿದಾರ ರೈತರಿಗೆ ಸಾಗುವಳಿ ಪತ್ರ ನೀಡಲು ಆಗ್ರಹ
ಮಳವಳ್ಳಿ : ಬಗರ್ ಹುಕುಂ ಸಾಗುವಳಿ ದಾರರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಮಳವಳ್ಳಿ ಪಟ್ಟಣದಲ್ಲಿ ಬಹುಜನ ಸಮಾಜ ಪಾರ್ಟಿ ಮುಖಂಡರು ಪ್ರತಿಭಟನೆ ನಡೆಸಿದರು. ಸೋಮವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಪಟ್ಟಣದ ಅಂಬೇಡ್ಕರ್ ಪುತ್ಥಳಿ ಆವರಣ ದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ದಾರಿಯು ದ್ದಕ್ಕೂ ಸರ್ಕಾರ ಹಾಗೂ ಅಧಿಕಾರಿ ಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಾಲ್ಲೂಕು ಕಚೇರಿ ತಲುಪಿದ ಮುಖಂಡರು ಹಾಗೂ ರೈತರು ಅಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಿ ದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಎಂ ಕೃಷ್ಣ ಮೂರ್ತಿ ಅವರು ನೂರಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿದರು.