ಮಳವಳ್ಳಿ: ತಾಲ್ಲೂಕಿನ ಬಿ ಜಿ ಪುರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿಗರ ಆಯ್ಕೆ
ಮಳವಳ್ಳಿ : ತಾಲ್ಲೂಕಿನ ಬಿ ಜಿ ಪುರ ಗ್ರಾಮದ ವಿವಿಧೋದ್ದೇಶ ಪ್ರಾಥ ಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎಂ ಪರಶಿವಮೂರ್ತಿ ಉಪಾಧ್ಯಕ್ಷರಾಗಿ ಭಾಗ್ಯ ಶಿವಮೂರ್ತಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಭಾನುವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಚುನಾವಣೆ ನಿಗಧಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಕಗ್ಗಲೀಪುರದ ಎಂ ಪರಶಿವಮೂರ್ತಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿ ಜಿ ಪುರದವರೇ ಆದ ಭಾಗ್ಯ ಶಿವಮೂರ್ತಿ ಅವರಿಬ್ಬರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಾಲ್ಲೂಕು ಸಿಡಿಒ ರಾಮಕೃಷ್ಣ ಘೋಷಿಸಿದರು. ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ನಂಜುಂಡಸ್ವಾಮಿ ಸಭೆಯಲ್ಲಿ ಹಾಜರಿದ್ದರು.