ಹಾವೇರಿ: ಅ.2ರಂದು ಗಾಂಧಿ ಜಯಂತಿ ಹಿನ್ನೆಲೆ ನಗರದಲ್ಲಿ ಮದುಮಗಳಂತೆ ಸಿದ್ಧಗೊಂಡಿರುವ ಗಾಂಧಿ ವೃತ್ತ; ವಿದ್ಯುದ್ಧಿಪಾಲಂಕಾರದಿಂದ ಆಕರ್ಷಣೆ
Haveri, Haveri | Oct 1, 2025 ಹಾವೇರಿ ನಗರ ಸೇರಿದಂತೆ ಜಿಲ್ಲಾದ್ಯಂತ ಅಕ್ಟೋಬರ್ 2ರಂದು ರಾಷ್ಟ್ರ ಪಿತ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ನಗರದ ಎಂ.ಜಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಬಣ್ಣ ಲೇಪನ, ಶಾಮಿಯಾನ, ವಿದ್ಯುತ್ ದೀಪಾಲಂಕಾರ ಸೇರಿದಂತೆ ಡೆಕೋರೇಶನ್ ಕಾರ್ಯಗಳು ಪೂರ್ಣಗೊಂಡಿವೆ. ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿಗಳಿಂದ ಮಾಲಾರ್ಪಣೆ ನಡೆಯಲಿದೆ. ಜಿಲ್ಲಾಡಳಿತ ವತಿಯಿಂದ ವೇದಿಕೆ ಕಾರ್ಯಕ್ರಮ ಗಾಂಧಿ ಭವನದಲ್ಲಿ ನಡೆಯಲಿದೆ.