ಬೆಂಗಳೂರು ಉತ್ತರ: ದೊಡ್ಡ ಆಲಹಳ್ಳಿಯಲ್ಲಿ ನೂತನ ರಾಮ ಮಂದಿರ ಉದ್ಘಾಟನೆ: ಶ್ರೀರಾಮ ದರ್ಶನ ಪಡೆದ ಡಿಕೆ ಶಿವಕುಮಾರ್
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಮಂದಿರ ಸೇವಾ ಸಮಿತಿ ವತಿಯಿಂದ ನಿರ್ಮಿಸಲಾದ ನೂತನ ರಾಮ ಮಂದಿರದ ಉದ್ಘಾಟನೆ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಶ್ರೀರಾಮನ ದರ್ಶನ ಪಡೆದು ಭಕ್ತಿಭಾವ ಮೆರೆದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಎಲ್ಲಾ ಜಾತಿ–ಧರ್ಮದವರಿಗೆ ಧಾರ್ಮಿಕ ಭಾವನೆಗೆ ಬೆಂಬಲ ನೀಡುತ್ತಾ ಇದುವರೆಗೂ ಸುಮಾರು 500ಕ್ಕೂ ಹೆಚ್ಚು ದೇವಸ್ಥಾನಗಳನ್ನು ನಿರ್ಮಿಸಿರುವುದು ಹೆಮ್ಮೆಯ ವಿಚಾರ ಎಂದರು. ಇದೇ ಸಂದರ್ಭದಲ್ಲಿ ಕನಕಪುರದಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಮೊದಲ ಬಾರಿ ಸಂಚರಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಬ