ಹುಬ್ಬಳ್ಳಿ :ಅಧಿವೇಶನ ಮುಗಿಸಿ ಹುಬ್ಬಳ್ಳಿಗೆ ಆಗಮಿಸಿದ ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಬಿಜೆಪಿ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ದೊರಕಿತು. ಅಧಿವೇಶನದಲ್ಲಿ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಧ್ವನಿಯಾಗಿ ಹೊರತಂದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಅವರಿಗಾಗಿ ಅದ್ದೂರಿ ಮೆರವಣಿಗೆ ನಡೆಸಲಾಯಿತು. ನಗರದ ಗೋಕುಲ್ ರಸ್ತೆಯಿಂದ ಜೆ.ಸಿ.ನಗರದಲ್ಲಿರುವ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕಚೇರಿವರೆಗೆ ಕಿಲೋಮೀಟರ್ಗಟ್ಟಲೆ ರ್ಯಾಲಿ ನಡೆಯಿತು. ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೈಕ್ಗಳ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ವೇಳೆ ಮಹಿಳಾ ಕಾರ್ಯಕರ್ತರು ಆರತಿ ಎತ್ತಿ ಶಾಸಕರಿಗೆ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ, ಹೂವಿನ ಮಳೆಗೈದು ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು.