ಯಲ್ಲಾಪುರ: ಸ್ವಾತಂತ್ರ್ಯ ಚಳುವಳಿ ಯಂತೆ ಕನ್ನಡ ಉಳಿಸಿ ಬೆಳೆಸುವ ದಿಶೆಯಲ್ಲಿ ಮನೆಗೊಂದು ಗ್ರಂಥಾಲಯ ಮೂಲಕ ಕನ್ನಡದ ಪ್ರೀತಿ ಹೆಚ್ಚಿಸುವ, ಚಳುವಳಿಯಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಕನ್ನಡ ಪುಸ್ತಕ ಪ್ರಾದಿಕಾರ,ಜಿಲ್ಲಾ ಘಟಕದ ಆಶ್ರಯದಲ್ಲಿ ಮಂಗಳವಾರ ಮನೆಗೊಂದು ಗೃಂಥಾಲಯ ಕರಪತ್ರ ಬಿಡುಗಡೆ ಹಾಗೂ ಜಿಲ್ಲಾ ಜಾಗೃತ ಸಮಿತಿಯ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪುಸ್ತಕ ಎಂಬುದು ಕೇವಲ ಸರಕಾ ಗದೆ ಅದೊಂದು ಸಂಸ್ಕೃತಿಯಾಗಿದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ಬಿ ಎನ್ ವಾಸರೆ,ಬೀರಣ್ಣ ಮೊಗಟಾ ಇತರರು ಇದ್ದರು.