ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ ll ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ