ಹೊಸನಗರ: ಅರಸಾಳು ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗ ರೈತರ ಪ್ರತಿಭಟನೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು, ಬೆಳ್ಳೂರು,ಕೆಂಚನಾಳ, ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡಾನೆಯ ಹಿಂದಿನ ದಾಳಿ ಅತಿ ಹೆಚ್ಚಾಗಿದೆ ಇದರಿಂದಾಗಿ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿದೆ ಅಲ್ಲದೆ ಶಾಲಾ ಕಾಲೇಜುಗೆ ತೆರಳುವ ವಿದ್ಯಾರ್ಥಿಗಳು ಸಾರ್ವಜನಿಕರು ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಅರಸಾಳು ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂಭಾಗ ಗುರುವಾರ ಶಾಸಕ ಆರಗ ಜ್ಞಾನೇಂದ್ರಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.