ಚಿತ್ರದುರ್ಗದ ಕಬೀರಾನಂದ ಆಶ್ರಮದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಭಿರ ಹಾಗೂ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರ ಸಾರಥ್ಯದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ , ಚಿತ್ರದುರ್ಗ ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.