ಬಾದಾಮಿ: ಆಡಗಲ್ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ದುರ್ಗಪ್ಪನವರ ಅಂತ್ಯಕ್ರಿಯೆ
ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಅಡಗಲ್ಲ ಗ್ರಾಮದ ಯೋಧ ದುರ್ಗಪ್ಪ ಮಾದರ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರು ಜಮ್ಮು ಕಾಶ್ಮೀರದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದರು.ಆಡಗಲ್ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಆರ್ ಬಿ ತಿಮ್ಮಾಪುರ, ಶಾಸಕರಾದ ಬಿ ಬಿ ಚಿಮ್ಮನಕಟ್ಟಿ, ಮಾಜಿ ಶಾಸಕರಾದ ಎಮ್ ಕೆ ಪಟ್ಟಣಶೆಟ್ಟಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ಹನುಮಂತ ಮಾವಿನಮರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮುತ್ತು ಉಳ್ಳಾಗಡ್ಡಿ ಹಾಗೂ ಗ್ರಾಮದ ಗುರು-ಹಿರಿಯರು ಉಪಸ್ಥಿತರಿದ್ದರು