ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ನಗರದಲ್ಲಿ ಶಾಸಕ ಚನ್ನಬಸಪ್ಪಗೆ ಮನವಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರನ್ನು ಬುಧವಾರ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿದರು. ಬಳಿಕ ಸರ್ಕಾರಿ ನೌಕರರ ಏಳನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸುವ ವರದಿಯನ್ನ ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸುವುದು. ಎಂಪಿಎಸ್ ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯ ಮರು ಜಾರಿಗೊಳಿಸುವುದು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂಬರುವ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿಯನ್ನ ಶಾಸಕರಿಗೆ ಸಲ್ಲಿಸಿದರು.