ಹಳಿಯಾಳ: ಮಂಗಳವಾಡ ಗ್ರಾಮದ ಚರ್ಚ್ ಹತ್ತಿರದಿಂದ ಪಾಳಾ ಗ್ರಾಮದ ಕ್ರಾಸ್ ವರೆಗೆ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ
ಹಳಿಯಾಳ : ಲೋಕೋಪಯೋಗಿ ಇಲಾಖೆಯ ಅನುದಾನದಡಿ ಮಂಜೂರಾದ ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದ ಚರ್ಚ್ ಹತ್ತಿರದಿಂದ ಪಾಳಾ ಗ್ರಾಮದ ಕ್ರಾಸ್ ವರೆಗೆ ಅಂದಾಜು ರೂ.95.00 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ರಸ್ತೆ ಸುಧಾರಣಾ ಕಾಮಗಾರಿಗೆ ಸನಿವಾರ ಸಂಜೆ 4 ಗಂಟೆ ಸುಮಾರಿಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ರಸ್ತೆ ಕಾಮಗಾರಿ ಪೂರ್ಣಗೊಂಡು ಪ್ರಯಾಣಿಕರ ಹಾಗೂ ಗ್ರಾಮಾಂತರ ಪ್ರದೇಶದ ಆರ್ಥಿಕ ಚಟುವಟಿಕೆಗಳು, ಕೃಷಿ ಉತ್ಪನ್ನಗಳ ಸಾಗಣೆಯ ಅನುಕೂಲತೆ ಹೆಚ್ಚಲು ಈ ಕಾಮಗಾರಿ ಮಹತ್ವದ ಪಾತ್ರವಹಿಸಲಿದೆ ಎಂದರು.