ದಾವಣಗೆರೆ: ಶಾಸಕ ಶಾಮನೂರು ಶಿವಶಂಕ್ರಪ್ಪ ಹೇಳಿಕೆ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ: ನಗರದಲ್ಲಿ ಬಿಜೆಪಿ ಮಾಜಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಯಮ್ಮ
ದಾವಣಗೆರೆ ನಗರದ ಕಾಂಗ್ರೆಸ್ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅಡುಗೆ ಮಾಡುವುದಕ್ಕೆ ಮಾತ್ರ ಲಾಯಕ್ಕು ಎಂಬ ಹೇಳಿಕೆಗೆ ದಾವಣಗೆರೆ ನಗರದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷೆ ಜಯಮ್ಮ ಖಂಡನೆ ವ್ಯಕ್ತಪಡಿಸಿದ್ದಾರೆ. ಶಾಮನೂರು ಹೇಳಿಕೆ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ . ಇವತ್ತಿನ ಕಾಲಘಟ್ಟದಲ್ಲಿ ಮಹಿಳೆಯರು ಪೈಲಟ್ ಳು ಆಗಿದ್ದಾರೆ. ಗಡಿ ಕಾಯುವಂತ ಸೈನಿಕರಾಗಿದ್ದರೆ. ನೌಕಾಪಡೆಯಲ್ಲು ಕೂಡ ಕಮಾಂಡರ್ ಆಗಿದ್ದಾರೆ. ಹೀಗಾಗಿ ಕೊಡಲೇ ಶಾಮನೂರು ಶಿವಶಂಕರಪ್ಪನವರು ಮಹಿಳೆಯರಗೆ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.